ನಾಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Update: 2024-12-27 14:53 GMT

ಮನಮೋಹನ್‌ಸಿಂಗ್ | PTI

ಹೊಸದಿಲ್ಲಿ : ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಶನಿವಾರ ಹೊಸದಿಲ್ಲಿಯ ನಿಗಮ್‌ಭೋದಿ ಘಾಟ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಸಿಖ್ಖ್ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಮಾಜಿ ಪ್ರಧಾನಿಯ ಪಾರ್ಥಿವ ಶರೀರವನ್ನು ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಮುಖ್ಯ ಕಾರ್ಯಾಲಯದಲ್ಲಿ ಶನಿವಾರ ಬೆಳಗ್ಗೆ 8:00ರಿಂದ 10:00ರವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.

ಎಐಸಿಸಿ ಕಾರ್ಯಾಲಯದಲ್ಲಿ ರಾಹುಲ್‌ಗಾಂಧಿ, ಸೋನಿಯಾಗಾಂಧಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಶ್ರದ್ದಾಂಜಲಿ ಅರ್ಪಿಸಲಿದ್ದಾರೆ.

ಆನಂತರ ನಿಗಮ್‌ ಬೋಧಿ ಘಾಟ್‌ಗೆ ಪಾರ್ಥಿವ ಶರೀರದ ಅಂತಿಮಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಮನಮೋಹನ್‌ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಸಕಲ ಏರ್ಪಾಡುಗಳನ್ನು ಮಾಡುವಂತೆ ರಕ್ಷಣಾ ಇಲಾಖೆಗೆ ಸೂಚಿಸಲಾಗಿದೆ. ಮನಮೋಹನ್‌ಸಿಂಗ್ ಗೌರವಾರ್ಥ ಕೇಂದ್ರ ಸರಕಾರವು ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News