ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ ನೀಡಿದ ಕುಸ್ತಿಪಟು ವಿನೇಶ್ ಫೋಗಟ್
ಹೊಸದಿಲ್ಲಿ: ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ರಾಜೀನಾಮೆ ಪತ್ರದೊಂದಿಗೆ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗಳು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದ್ದಾರೆ.
ವಿನೇಶ್ ಫೋಗಟ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕಗೊಂಡಿದ್ದರು.
ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರನ್ನು ರಾಜಾಜಿ ಮಾರ್ಗದಲ್ಲಿ ಭೇಟಿ ಮಾಡಿದ್ದಾರೆ.
ಪುನಿಯಾ ಅವರು ಟೋಕಿಯೊ ಗೇಮ್ಸ್ ಕಂಚಿನ ಪದಕ ವಿಜೇತರಾಗಿದ್ದರೆ, ಫೋಗಾಟ್ ಅವರು ಒಲಿಂಪಿಕ್ಸ್ ಫೈನಲ್ ತಲುಪಿದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.