ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಇಬ್ಬರು ಸೇನಾಧಿಕಾರಿಗಳು ಸೇರಿ ನಾಲ್ವರು ಹುತಾತ್ಮ

Update: 2023-11-22 14:49 GMT

ಸಾಂದರ್ಭಿಕ ಚಿತ್ರ (PTI)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಭೀಕರ ಎನ್ಕೌಂಟರ್ ನಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ndtv ವರದಿ ಮಾಡಿದೆ.

ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಎನ್ಕೌಂಟರ್ ಪ್ರಾರಂಭವಾಯಿತು ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಿರ್ ಪಂಜಾಲ್ ಅರಣ್ಯವು ಕಳೆದ ಕೆಲವು ವರ್ಷಗಳಿಂದ ಭದ್ರತಾ ಪಡೆಗಳಿಗೆ ಸವಾಲಾಗಿದೆ. ಭಯೋತ್ಪಾದಕರು ದಟ್ಟವಾದ ಕಾಡುಗಳನ್ನು ತಮ್ಮ ಅಡಗುದಾಣವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬುಧಾಲ್ ತೆಹ್ಸಿಲ್ನ ಗುಲ್ಲೆರ್-ಬೆಹ್ರೋಟ್ ಪ್ರದೇಶದಲ್ಲಿ ಸೇನೆ, ಪೊಲೀಸ್ ಮತ್ತು ಸಿಆರ್ಪಿಎಫ್ನ ಜಂಟಿ ತಂಡ ನಡೆಸಿದ ಸರ್ಚ್ ಆಪರೇಷನ್ ನಲ್ಲಿ ಎನ್ಕೌಂಟರ್ ನಡೆಯಿತು ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News