ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಕೋಲಾರದ ನಾಲ್ವರು ಮೃತ್ಯು
Update: 2025-01-09 14:08 IST

ಸಾಂದರ್ಭಿಕ ಚಿತ್ರ
ರಾಣಿಪೇಟ್: ತರಕಾರಿ ಸಾಗಣೆ ಮಾಡುತ್ತಿದ್ದ ಟ್ರಕ್ ಒಂದಕ್ಕೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ, ನಾಲ್ವರು ಯಾತ್ರಾರ್ಥಿಗಳು ಮೃತಪಟ್ಟಿರುವ ಘಟನೆ ಇಂದು ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರು ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯವರಾಗಿದ್ದು, ಅವರೆಲ್ಲ ಚೆನ್ನೈ ಬಳಿಯ ದೇವಸ್ಥಾನವೊಂದಕ್ಕೆ ಭೇಟಿ ನೀಡಿ, ಕೆಎಸ್ಸಾರ್ಟಿಸಿ ಬಸ್ ನಲ್ಲಿ ಮನೆಗೆ ಮರಳುವಾಗ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.
ಈ ಅಪಘಾತದಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದಾರೆ.