ಕೇರಳ| ರೈಲ್ವೆ ಹಳಿಯಿಂದ ಕಸ ತೆರವುಗೊಳಿಸುತ್ತಿದ್ದಾಗ ರೈಲು ಢಿಕ್ಕಿ; ನಾಲ್ವರು ಕಾರ್ಮಿಕರು ಮೃತ್ಯು
Update: 2024-11-03 05:15 GMT
ಕೇರಳ: ದಿಲ್ಲಿಯಿಂದ ತಿರುವನಂತಪುರಂಗೆ ಸಂಚರಿಸುತ್ತಿದ್ದ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಶೋರನೂರ್ ರೈಲ್ವೇ ನಿಲ್ದಾಣದ ಪಕ್ಕದಲ್ಲಿನ ಸೇತುವೆಯ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದ ಕಾರ್ಮಿಕರಿಗೆ ರೈಲು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರ್ಮಿಕರು ಹಳಿಯಿಂದ ಎಸೆಯಲ್ಪಟ್ಟಿದ್ದು, ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ನಾಲ್ಕನೆಯ ಮೃತದೇಹಕ್ಕೆ ಹುಡುಕಾಟ ನಡೆಸಲಾಗುತ್ತಿದ್ದು, ಭರತಪುಳ ನದಿಗೆ ಎಸೆಯಲ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ರೈಲ್ವೇ ಪೊಲೀಸರ ತಂಡ ತೆರಳಿ ಪರಿಶೀಲನೆ ನಡೆಸಿದೆ. ರೈಲು ಬರುತ್ತಿರುವುದನ್ನು ಕಾರ್ಮಿಕರು ಗಮನಿಸದೆ ಇದ್ದ ಕಾರಣ ಈ ಅವಘಡ ಸಂಭವಿಸಿರಬಹುದು. ಈ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಶೋರನೂರ್ ರೈಲ್ವೆ ಅಧಿಕಾರಿಯೋರ್ವರು ತಿಳಿಸಿದ್ದಾರೆ.