ತೆಲಂಗಾಣ ಮಹಿಳೆಯರಿಗೆ ಉಚಿತ ಪ್ರಯಾಣ; ಭರವಸೆ ಈಡೇರಿಸಿದ ಕಾಂಗ್ರೆಸ್

Update: 2023-12-10 05:59 GMT

Photo: twitter.com/INCTelangana

ಹೊಸದಿಲ್ಲಿ: ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ ಎರಡು ಗ್ಯಾರೆಂಟಿಗಳನ್ನು ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಕ್ಷಣವೇ ಜಾರಿಗೊಳಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಆರಂಭಿಸಲಾಗಿದೆ. ಆದರೆ ರಾಜ್ಯದ ಆರ್ಥಿಕ ಸ್ಥಿತಿಗತಿಯ ಹಿನ್ನೆಲೆಯಲ್ಲಿ ಈ ಭರವಸೆಯನ್ನು ಈಡೇರಿಸುವುದು ಹೊಸ ಸರ್ಕಾರಕ್ಕೆ ಸವಾಲಾಗಿದೆ.

ಹೊಸ ಸೌಲಭ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಕಾಲೇಜು ವಿದ್ಯಾರ್ಥಿನಿಗಳು , "ಇದು ಕೇವಲ ವಿದ್ಯಾರ್ಥಿನಿಯರಿಗೆ ಮತ್ತು ವೃತ್ತಿಪರ ಮಹಿಳೆಯರಿಗೆ ಮಾತ್ರವಲ್ಲದೇ ವಯಸ್ಸಾದ ಮಹಿಳೆಯರಿಗೂ ಇದು ವರದಾನ. ಕಾಲೇಜಿಗೆ ತೆರಳಲು ಅಥವಾ ಉದ್ಯೋಗ ಹುಡುಕಲು ತೆರಳುವ ಯುವತಿಯರಿಗೆ ಇದು ನಿಜವಾಗಿಯೂ ನೆರವಿಗೆ ಬರುವಂಥದ್ದು" ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡೇ ದಿನದಲ್ಲಿ ರೇವನಾಥ್ ರೆಡ್ಡಿ, ಎರಡು ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಒಂದು ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಇನ್ನೊಂದು ಮಹಿಳೆಯರ ಆರೋಗ್ಯ ವಿಮೆಯ ಮಿತಿಯನ್ನು 10 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದು. ಸೋನಿಯಾಗಾಂಧಿಯವರ ಹುಟ್ಟುಹಬ್ಬದ ದಿನದಂದೇ ಇದಕ್ಕೆ ಚಾಲನೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News