ರಾಜಸ್ಥಾನದಲ್ಲಿನ್ನು ಸರಕಾರಿ ನೌಕರರು ಆರೆಸ್ಸೆಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು!

Update: 2024-08-25 10:46 GMT

   ಸಾಂದರ್ಭಿಕ ಚಿತ್ರ | PTI 

ಜೈಪುರ : ರಾಜಸ್ಥಾನದ ಬಿಜೆಪಿ ಸರ್ಕಾರವು ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲೆ ಹೇರಿದ್ದ ನಿಷೇಧವನ್ನು ತೆಗೆದುಹಾಕಿದೆ ಎಂದು The Hindu ವರದಿ ಮಾಡಿದೆ.

ಸರಕಾರಿ ನೌಕರರು ಪಟ್ಟಿ ಮಾಡಲಾದ 17 ಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಲಾಗಿತ್ತು. ಅದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮೂಲ ಎಂದು ಪರಿಗಣಿಸಲಾದ ಹಿಂದುತ್ವ ಸಂಘಟನೆಯ ಮೇಲಿನ ನಿಷೇಧವು 1972 ರಿಂದ ರಾಜ್ಯದಲ್ಲಿ ಜಾರಿಯಲ್ಲಿತ್ತು.

ಜುಲೈ 9 ರಂದು ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗುವಂತೆ ಅನುಕೂಲವಾಗಲು 58 ವರ್ಷಗಳ ಹಿಂದಿನ ನಿಷೇಧವನ್ನು ತೆಗೆದುಹಾಕಿತು.

ಈ ಹಿಂದೆ, ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಹಲವಾರು ರಾಜ್ಯ ಸರ್ಕಾರಗಳು ಸರಕಾರಿ ನೌಕರರು ಆರೆಸ್ಸೆಸ್ ಸಂಘಟನೆಯ ಸದಸ್ಯರಾಗಲು, ಅವರ ಮೇಲಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದವು ಎಂದು ಪಿಟಿಐ ವರದಿ ಮಾಡಿದೆ.

ಸ್ವಾತಂತ್ರ್ಯದ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮೂರು ಬಾರಿ ನಿಷೇಧಿಸಲಾಗಿದೆ. ಮಹಾತ್ಮ ಗಾಂಧಿಯವರ ಹತ್ಯೆಯ ನಂತರ, 1975 ರಿಂದ 1977 ರ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News