ಡ್ರಗ್ಸ್ ಪ್ರಕರಣ | ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಗುಜರಾತ್ ಕೋರ್ಟ್

Update: 2024-03-28 13:05 GMT

ಸಂಜೀವ್ ಭಟ್ ದೋಷಿ | Photo: PTI 

ಪಾಲನ್ಪುರ : 1996ರಲ್ಲಿ ವಕೀಲರೊಬ್ಬರನ್ನು ಬಂಧಿಸಲು ಡ್ರಗ್ಸ್ ಇಟ್ಟಿದ್ದ ಪ್ರಕರಣದಲ್ಲಿ ಗುಜರಾತ್ನ ಬನಸ್ಕಾಂತ ಜಿಲ್ಲೆಯ ಪಾಲನ್ಪುರದ ಸೆಷನ್ಸ್ ನ್ಯಾಯಾಲಯವು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈಗಾಗಲೇ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೈಲು ಸೇರಿರುವ ಭಟ್, 1996 ರಲ್ಲಿ ವಕೀಲರು ತಂಗಿದ್ದ ಪಾಲನ್ಪುರದ ಹೋಟೆಲ್ ಕೊಠಡಿಯಿಂದ ಡ್ರಗ್ಸ್ ವಶಪಡಿಸಿಕೊಂಡಿದ್ದ ಸುಳ್ಳು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವಕೀಲರೊಬ್ಬರನ್ನು ಸಿಲುಕಿಸಿದ್ದರು ಎನ್ನಲಾಗಿದೆ.

2015ರಲ್ಲಿ ಪಡೆಯಿಂದ ವಜಾಗೊಂಡ ಭಟ್ ಅವರು ಆ ಸಮಯದಲ್ಲಿ ಬನಸ್ಕಾಂತ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ ಎನ್ ಠಕ್ಕರ್ ಅವರು ಬುಧವಾರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಭಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News