ಹರ್ಯಾಣ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ಸಚಿವ ಸ್ಥಾನಕ್ಕೆ ರಂಜಿತ್ ಚೌಟಾಲ ರಾಜೀನಾಮೆ
Update: 2024-09-05 14:10 GMT
ಚಂಡಿಗಢ: ಮುಂಬರುವ ಹರ್ಯಾಣ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಬಳಿಕ ಹರ್ಯಾಣದ ಸಚಿವ ರಂಜಿತ್ ಸಿಂಗ್ ಚೌಟಾಲ ಅವರು ತನ್ನ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
90 ಸದಸ್ಯ ಬಲದ ವಿಧಾನ ಸಭೆಯ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ 37 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹೆಸರಿಲ್ಲದ 9 ಹಾಲಿ ಶಾಸಕರರಲ್ಲಿ ಹರ್ಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರ ಸಹೋದರ ರಂಜಿತ್ ಚೌಟಾಲ ಕೂಡ ಸೇರಿದ್ದಾರೆ.
ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು ಅಕ್ಟೋಬರ್ 5ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.