"ಹರ್ಯಾಣದ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸುತ್ತೇವೆ": ಚುನಾವಣಾ ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ

Update: 2024-10-09 07:04 GMT

ರಾಹುಲ್ ಗಾಂಧಿ (Photo: PTI)

ಹೊಸದಿಲ್ಲಿ: ಜಮ್ಮು-ಕಾಶ್ಮೀರ ಮತ್ತು ಹರ್ಯಾಣ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಹರ್ಯಾಣದ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸುತ್ತೇವೆ ಎಂದು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, "ಜಮ್ಮು- ಕಾಶ್ಮೀರದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಇಂಡಿಯಾ ಮೈತ್ರಿಕೂಟದ ವಿಜಯವು ಸಂವಿಧಾನದ ವಿಜಯವಾಗಿದೆ. ಪ್ರಜಾಪ್ರಭುತ್ವದ ವಿಜಯವಾಗಿದೆ ಎಂದು ಹೇಳಿದ್ದಾರೆ.

ನಾವು ಹರ್ಯಾಣದ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸುತ್ತಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ನಾವು ಚುನಾವಣಾ ಆಯೋಗದ ಗಮನ ಸೆಳೆಯುತ್ತೇವೆ ಎಂದು ಹೇಳಿದ್ದಾರೆ.

ಹರ್ಯಾಣದಲ್ಲಿ ಪಕ್ಷವನ್ನು ಬೆಂಬಲಿಸಿದ ಎಲ್ಲಾ ಜನರಿಗೆ ಮತ್ತು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು. ನಾವು ಹಕ್ಕುಗಳಿಗಾಗಿ, ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ, ಸತ್ಯಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ನಿಮ್ಮ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಮಾಡಿದ ಪೋಸ್ಟ್ನಲ್ಲಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News