ಅವಿವಾಹಿತರಿಗೆ ಪಿಂಚಣಿ ನೀಡುವುದಾಗಿ ಘೋಷಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Update: 2023-07-03 15:42 GMT

ಫೋಟೊ- PTI

ಚಂಢೀಗಡ: ಹರ್ಯಾಣ ರಾಜ್ಯದ ಅವಿವಾಹಿತ ಪುರುಷರು ಮತ್ತು ಮಹಿಳೆಯರಿಗೆ ಮಾಸಿಕ ಪಿಂಚಣಿ ಪ್ರಾರಂಭಿಸಲು ರಾಜ್ಯ ಸರ್ಕಾರವು ನೀತಿಯನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಹೇಳಿದ್ದಾರೆ.

ಕರ್ನಾಲ್ ಜಿಲ್ಲೆಯ ಕಲಂಪುರ ಗ್ರಾಮದಲ್ಲಿ ‘ಜನ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಖಟ್ಟರ್, ಸರ್ಕಾರವು ನೂತನ ಯೋಜನೆಯನ್ನು ಪರಿಚಯಿಸಲು ಯೋಜಿಸುತ್ತಿದೆ, ಒಂದು ತಿಂಗಳೊಳಗೆ ನೀತಿ ಸಿದ್ಧವಾಗಲಿದೆ ಎಂದು ಖಟ್ಟರ್ ಹೇಳಿದರು.

''45 ರಿಂದ 60 ವರ್ಷದೊಳಗಿನ ಅವಿವಾಹಿತರಿಗೆ ರಾಜ್ಯ ಸರ್ಕಾರದಿಂದ ಪಿಂಚಣಿ ಕೊಡುವ ಬಗ್ಗೆ ಇನ್ನೊಂದು ತಿಂಗಳಲ್ಲಿ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ'' ಎಂದು ಖಟ್ಟರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News