ಅ.6ರಂದು ಸುಪ್ರೀಂ ಕೋರ್ಟ್ ನಲ್ಲಿ ಬಿಹಾರ ಜಾತಿಗಣತಿ ಅರ್ಜಿಗಳ ವಿಚಾರಣೆ
Update: 2023-10-03 15:29 GMT
ಹೊಸದಿಲ್ಲಿ: ಬಿಹಾರದಲ್ಲಿ ಜಾತಿ ಗಣತಿಗೆ ಹಸಿರು ನಿಶಾನೆಯನ್ನು ತೋರಿಸಿದ್ದ ಪಾಟ್ನಾ ಉಚ್ಚ ನ್ಯಾಯಾಲಯದ ಆ.1ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಅ.6ರಂದು ನಡೆಸಲಿದೆ.
ಸೋಮವಾರ ಬಿಹಾರದ ನಿತೀಶ ಕುಮಾರ ಸರಕಾರವು ತನ್ನ ಬಹುನಿರೀಕ್ಷಿತ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಿದ್ದು,ರಾಜ್ಯದ ಜನಸಂಖ್ಯೆಯಲ್ಲಿ ಒಬಿಸಿಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಪಾಲು ಶೇ.63ರಷ್ಟಿದೆ ಎನ್ನುವುದನ್ನು ಜಾತಿ ಗಣತಿಯು ಬೆಳಕಿಗೆ ತಂದಿದೆ.
ಸೆ.6ರಂದು ಸರ್ವೋಚ್ಚ ನ್ಯಾಯಾಲಯವು ಪಾಟ್ನಾ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಅ.3ಕ್ಕೆ ಮುಂದೂಡಿತ್ತು.
ಆ.7ರಂದು ಸರ್ವೋಚ್ಚ ನ್ಯಾಯಾಲಯವು ಉಚ್ಚ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.