ತಮಿಳುನಾಡಿನಲ್ಲಿ ಭಾರೀ ಮಳೆ ; ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಚೆನ್ನೈ: ಉತ್ತರ ವಲಯ ಸೇರಿದಂತೆ ತಮಿಳುನಾಡಿನ ವಿವಿಧ ಭಾಗಗಳಲ್ಲಿ ರವಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು.
ವಿಲ್ಲುಪುರಂ, ಕಲ್ಲಕುರಿಚಿ, ಕುಡಲೂರು, ನಾಗಪಟ್ಟಿಣಂ ಹಾಗೂ ತಿರುವಾರೂರು ಅಲ್ಲದೆ, ಚೆನ್ನೈ ಹಾಗೂ ನೆರೆಯ ಚೆಂಗಲ್ಪಟ್ಟು ಹಾಗೂ ಕಾಂಚಿಪುರಂನಲ್ಲಿ ಉತ್ತಮ ಮಳೆ ಸುರಿದಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು ಹಾಗೂ ಕಲ್ಲಕುರಿಚಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
ನಾಗಪಟ್ಟಿಣಂ ಹಾಗೂ ಕೀಲ್ವೆಲೂರ್ ಸರ್ಕಲ್ಗಳಲ್ಲಿನ ಶಾಲೆ ಹಾಗೂ ಕಾಲೇಜುಗಳಿಗೆ ಕೂಡ ನಾಗಪಟ್ಟಿಣಂ ಜಿಲ್ಲಾಡಳಿತ ರಜೆ ಘೋಷಿಸಿತ್ತು.
ರವಿವಾರ ಬೆಳಗ್ಗೆ 8.30ರಿಂದ ಸೋಮವಾರ ಮುಂಜಾನೆ 5.30ರ ವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ 167 ಮಿ.ಮೀ. ಮಳೆ ಬಿದ್ದಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ಹೇಳಿದೆ.
ಇದೇ ಅವಧಿಯಲ್ಲಿ ಕಾರೈಕ್ಕಲ್ (ಪುದುಚೇರಿ ಯುಟಿ)ನಲ್ಲಿ 122 ಮೀ.ಮೀ. ಮಳೆ ಬಿದ್ದಿದೆ ಎಂದು ಅದು ಹೇಳಿದೆ.