ಈಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ ಹೇಮಂತ್ ಸೊರೇನ್
Update: 2024-01-31 17:01 GMT
ಹೊಸದಿಲ್ಲಿ : ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳ ವಿರುದ್ಧ ಇಲ್ಲಿನ ಎಸ್ಸಿ, ಎಸ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಸೊರೇನ್ ರ ದಿಲ್ಲಿ ನಿವಾಸದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ ನಡೆಸಿದ ಶೋಧ ಕಾರ್ಯಾಚರಣೆಗೆ ಸಂಬಂಧಿಸಿ ಈ ಪೊಲೀಸ್ ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
‘‘ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಾವು ಮುಖ್ಯಮಂತ್ರಿ ಅವರಿಂದ ದೂರು ಸ್ವೀಕರಿಸಿದ್ದೇವೆ’’ ಎಂದು ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಎಫ್ಐಆರ್ ಕುರಿತಂತೆ ಇತರ ವಿವರಗಳನ್ನು ಸಿನ್ಹಾ ನೀಡಿಲ್ಲ.