ಪರೀಕ್ಷೆಯ ನಡುವೆ ಚುನಾವಣಾ ಕಾರ್ಯಕ್ಕೆ ಶಿಕ್ಷಕರ ನಿಯೋಜನೆ: ಹೈಕೋರ್ಟ್ ಮೆಟ್ಟಿಲೇರಿದ ಪೋಷಕರು
Update: 2024-10-18 12:51 GMT
ಮುಂಬೈ: ನಗರದ ಶಾಲೆಯೊಂದರ ಪೋಷಕರು ಪರೀಕ್ಷೆಯ ನಡುವೆ ಚುನಾವಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ಚುನಾವಣಾ ಆಯೋಗದ ಸುತ್ತೋಲೆಗಳನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶಿಕ್ಷಣ ಇಲಾಖೆಯ 2000 ಕ್ಕೂ ಹೆಚ್ಚು ಉದ್ಯೋಗಿಗಳನ್ನು, ಹೆಚ್ಚಾಗಿ ಶಿಕ್ಷಕರನ್ನು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲು ಬೂತ್ ಮಟ್ಟದ ಅಧಿಕಾರಿಗಳಾಗಿ ನಿಯೋಜಿಸಿದೆ.
ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಪೋಷಕರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ.