ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ 8 ಶಾಸಕರನ್ನು ಅನರ್ಹಗೊಳಿಸದ ಸ್ಪೀಕರ್ ನಿರ್ಧಾರವನ್ನು ಎತ್ತಿ ಹಿಡಿದ ಹೈಕೋರ್ಟ್

Update: 2025-01-16 15:47 GMT

 ರಮೇಶ್ ತಾವಡ್ಕರ್ | PC : X 

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಆಡಳಿತಾರೂಢ ಬಿಜೆಪಿಗೆ ಸೇರಿದ ಎಂಟು ಮಂದಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸದ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರ ನಿರ್ಧಾರವನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಗುರುವಾರ ಎತ್ತಿಹಿಡಿದಿದೆ.

ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ (ಜಿಪಿಸಿಸಿ) ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರು ಕಾಂಗ್ರೆಸ್ ಪಕ್ಷ ತೊರೆದ ಶಾಸಕರನ್ನು ಅನರ್ಹ ಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ, ಕಳೆದ ನ.1 ರಂದು ಶಾಸಕರಾದ ದಿಗಂಬರ್ ಕಾಮತ್, ಅಲೆಕ್ಸೊ ಸಿಕ್ವೇರಾ, ಸಂಕಲ್ಪ್ ಅಮೋಂಕರ್, ಮೈಕೆಲ್ ಲೋಬೊ, ಡೆಲಿಲಾ ಲೋಬೊ, ಕೇದಾರ್ ನಾಯಕ್, ರುಡಾಲ್ಫ್ ಫರ್ನಾಂಡಿಸ್ ಮತ್ತು ರಾಜೇಶ್ ಫಾಲ್ದೇಸಾಯಿ ಅವರ ವಿರುದ್ಧದ ಅನರ್ಹತೆ ಅರ್ಜಿಯನ್ನು ವಿಧಾನಸಭಾ ಸ್ಪೀಕರ್ ತಾವಡ್ಕರ್ ವಜಾಗೊಳಿಸಿದ್ದರು.

ತವಾಡ್ಕರ್ ಅವರ ನಿರ್ಧಾರವನ್ನು ಪ್ರಶ್ನಿಸಿ ಚೋಡಂಕರ್ ಜನವರಿ 6ರಂದು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಮಕರಂದ್ ಕಾರ್ಣಿಕ್ ಮತ್ತು ನಿವೇದಿತಾ ಮೆಹ್ತಾ ಅವರ ವಿಭಾಗೀಯ ಪೀಠವು ಚೋಡಂಕರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಸ್ಪೀಕರ್ ಆದೇಶವನ್ನು ಎತ್ತಿಹಿಡಿದಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News