4 ವರ್ಷಗಳಲ್ಲಿ ನೀವು ಏನನ್ನೂ ಮಾಡಿಲ್ಲ: ಕೇರಳ ಸರಕಾರಕ್ಕೆ ಹೈಕೋರ್ಟ್‌ ತರಾಟೆ

Update: 2024-09-10 09:57 GMT

 ಕೇರಳ ಹೈಕೋರ್ಟ್ |  PC :PTI 

ಕೇರಳ: ಮಲಯಾಳಂ ಚಿತ್ರರಂಗದಲ್ಲಿನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಬಯಲಿಗೆಳೆದ ನ್ಯಾಯಮೂರ್ತಿ ಹೇಮಾ ಸಮಿತಿ ವರದಿಯನ್ನು ಆಧರಿಸಿ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪ್ರಕರಣಗಳನ್ನು ದಾಖಲಿಸಿಕೊಳ್ಳದ ರಾಜ್ಯ ಸರ್ಕಾರವನ್ನು ಕೇರಳ ಹೈಕೋರ್ಟ್ ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ನ್ಯಾಯಮೂರ್ತಿ ಸಿ.ಎಸ್.ಸುಧಾ ಅವರನ್ನೊಳಗೊಂಡ ವಿಶೇಷ ಪೀಠ, ಈ ಕುರಿತು ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸರ್ಕಾರ ರಚಿಸಿದ್ದ ಎಸ್‌ಐಟಿಗೆ ಸೂಚಿಸಿದೆ.

ವರದಿಯನ್ನು 2019ರಲ್ಲಿಯೇ ಸರ್ಕಾರಕ್ಕೆ ಸಲ್ಲಿಸಿರುವುದನ್ನು ಗಮನಿಸಿದ ನ್ಯಾಯಾಲಯ, ಪ್ರಾಥಮಿಕವಾಗಿ ಈ ಬಗ್ಗೆ ಎಫ್‌ಐಆರ್‌ಗಳನ್ನು ದಾಖಲಿಸಿಲ್ಲ ಎಂಬುವುದನ್ನು ಗಮನಿಸಿದ್ದೇವೆ, ಈ ವಿಚಾರದಲ್ಲಿ ಸರಕಾರದ ನಿಷ್ಕ್ರಿಯತೆ ಕಂಡುಬಂದಿದೆ. 4 ವರ್ಷಗಳಲ್ಲಿ ನೀವು ಏನನ್ನೂ ಮಾಡಿಲ್ಲ ಎಂದು ಕೋರ್ಟ್‌ ಸರಕಾರಕ್ಕೆ ತರಾಟೆಗೆ ತೆಗೆದುಕೊಂಡಿದೆ.

ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನೀವು ಏನು ಮಾಡುತ್ತಿದ್ದೀರಿ? ಇದು ಕೇವಲ ಚಿತ್ರರಂಗದಲ್ಲಿ ಮಾತ್ರವಲ್ಲ. ನಮ್ಮ ರಾಜ್ಯದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ . ಇದು ಅಲ್ಪಸಂಖ್ಯಾತರ ಸಮಸ್ಯೆಯಲ್ಲ, ರಾಜ್ಯದಲ್ಲಿರುವ ಬಹುಸಂಖ್ಯಾತರ ಸಮಸ್ಯೆಯಾಗಿದೆ ಎಂದು ಹೇಳಿದೆ.

2017ರಲ್ಲಿ ನಟಿಯೋರ್ವರ ಮೇಲಿನ ಹಲ್ಲೆ ಪ್ರಕರಣ ಬಹಿರಂಗವಾದ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಮೇಲಿನ ಕಿರುಕುಳ ಮತ್ತು ಶೋಷಣೆಯ ಬಗ್ಗೆ ತನಿಖೆಗೆ ಕೇರಳ ಸರ್ಕಾರವು ನ್ಯಾಯಮೂರ್ತಿ ಹೇಮಾ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News