ಹೀರಾಲಾಲ್ ಸಮಾರಿಯಾ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ

Update: 2023-11-06 13:58 GMT

Image: rashtrapatibhvn/X

ಹೊಸದಿಲ್ಲಿ: ಹಿರಿಯ ಅಧಿಕಾರಿ ಹೀಲಾಲಾಲ್ ಸಮಾರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ವರ್ಷದ ಸಮಾರಿಯಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಹಾಗೂ ಇತರರು ಪಾಲ್ಗೊಂಡಿದ್ದರು.

ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ವೈ.ಕೆ. ಸಿನ್ಹಾ ಅವರ ಅಧಿಕಾರಾವಧಿ ಅ.3ರಂದು ಕೊನೆಗೊಂಡ ಹಿನ್ನೆಲೆಯಲ್ಲಿ ಖಾಲಿ ಬಿದ್ದಿತ್ತು.

ಸಮಾರಿಯಾ ಅವರು ಮಾಜಿ ಐಎಎಸ್ ಅಧಿಕಾರಿ. ಅವರು ಕಾರ್ಮಿಕ ಹಾಗೂ ಉದ್ಯೋಗ ಕಾಯರ್ದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು 2020 ನವೆಂಬರ್ 7ರಂದು ಸಿಐಸಿಯ ಮಾಹಿತಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News