ಎಚ್‌ಎಂಪಿವಿ| ಉಸಿರಾಟ ಕಾಯಿಲೆಗಳ ಬಗ್ಗೆ ನಿಗಾ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ
Update: 2025-01-07 16:09 GMT
ಹೊಸದಿಲ್ಲಿ : ಭಾರತದಲ್ಲಿ ಐದು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಉಸಿರಾಟ ಕಾಯಿಲೆಗಳ ಬಗ್ಗೆ ನಿಗಾ ಹೆಚ್ಚಿಸುವಂತೆ ಮತ್ತು ಹ್ಯೂಮನ್ ಮೆಟಾನ್ಯುಮೊ ವೈರಸ್(ಎಚ್‌ಎಂಪಿವಿ)ನ ಹರಡುವಿಕೆಯನ್ನು ನಿಯಂತ್ರಿಸಲು ಜಾಗ್ರತಿಯನ್ನು ಮೂಡಿಸುವಂತೆ ಕೇಂದ್ರ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ಪುಣ್ಯ ಸಲಿಲಾ ಶ್ರೀವಾಸ್ತವ ಅವರು ಸೋಮವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಗಳೊಂದಿಗೆ ನಡೆಸಿದ ಸಭೆಯಲ್ಲಿ ಉಸಿರಾಟ ಸಂಬಂಧಿತ ಕಾಯಿಲೆಗಳು ಮತ್ತು ಎಚ್‌ಎಂಪಿವಿ ಪ್ರಕರಣಗಳ ನಿರ್ವಹಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಚೀನಾದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಹೆಚ್ಚಳದ ವರದಿಗಳ ನಡುವೆ ಕರ್ನಾಟಕ ತಮಿಳುನಾಡು ಮತ್ತು ಗುಜರಾತ್‌ಗಳಲ್ಲಿ ಐದು ಎಚ್‌ಎಂಪಿವಿ ಪ್ರಕರಣಗಳು ದೃಢಪಟ್ಟ ದಿನವೇ ಈ ಸಭೆ ನಡೆದಿದೆ.