ಸಂಸತ್ತಿನ ಮೇಲಿನ ದಾಳಿಯ ಬಗ್ಗೆ ತನಿಖೆಗೆ ಗೃಹ ಸಚಿವಾಲಯ ಆದೇಶ

Update: 2023-12-13 17:51 GMT

Photo: PTI 

ಹೊಸದಿಲ್ಲಿ: ಬುಧವಾರ ಸಂಸತ್ತಿನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶಿಸಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳ ಸದಸ್ಯರು ಮತ್ತು ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಸಚಿವಾಲಯವು “ಸಂಸತ್ತಿನ ಭದ್ರತಾ ವೈಫಲ್ಯಕ್ಕೆ ಕಾರಣಗಳ ಬಗ್ಗೆ ತನಿಖೆ ಮಾಡುಲಾಗುವುದು. ಸಮಿತಿಯು ಲೋಪಗಳನ್ನು ಗುರುತಿಸಿ ಮುಂದಿನ ಕ್ರಮಕ್ಕೆ ಶಿಫಾರಸು ಮಾಡಲಿದೆ. ಸಂಸತ್ತಿನಲ್ಲಿ ಭದ್ರತೆಯನ್ನು ಸುಧಾರಿಸುವ ಸಲಹೆಗಳನ್ನು ಒಳಗೊಂಡ ಶಿಫಾರಸುಗಳೊಂದಿಗೆ ತನ್ನ ವರದಿಯನ್ನು ಶೀಘ್ರವಾಗಿ ಸಲ್ಲಿಸಲಿದೆ" ಎಂದು ಹೇಳಿದೆ.


Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News