ಹೈದರಾಬಾದ್ | ಕ್ಯಾಬ್ ಚಾಲಕನಿಂದ ಜರ್ಮನ್ ಮಹಿಳೆಯ ಅತ್ಯಾಚಾರ

Update: 2025-04-01 20:51 IST
ಹೈದರಾಬಾದ್ | ಕ್ಯಾಬ್ ಚಾಲಕನಿಂದ ಜರ್ಮನ್ ಮಹಿಳೆಯ ಅತ್ಯಾಚಾರ

ಸಾಂದರ್ಭಿಕ ಚಿತ್ರ

  • whatsapp icon

ಹೈದರಾಬಾದ್: ಸೋಮವಾರ ರಾತ್ರಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ 25ರ ಹರೆಯದ ಜರ್ಮನ್ ಮಹಿಳೆಯ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರವೆಸಗಿದ ಘಟನೆ ಇಲ್ಲಿಯ ಪಹಾಡಿಶರೀಫ್ ಪೋಲಿಸ್ ಠಾಣಾ ವ್ಯಾಪ್ತಿಯ ಮಾಮಿಡಿಪಲ್ಲಿಯಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.

ಮಹಿಳೆ ಹಗಲಿನಲ್ಲಿ ತನ್ನ ಸ್ನೇಹಿತರೊಂದಿಗೆ ನಗರದಲ್ಲಿಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ ಅವರನ್ನು ಮನೆಗಳಿಗೆ ಡ್ರಾಪ್ ಮಾಡಿ ಅದೇ ಕ್ಯಾಬ್‌ ನಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಮಾಮಿಡಿಪಲ್ಲಿ ಸಮೀಪ ನಿರ್ಜನ ಸ್ಥಳದಲ್ಲಿ ಕ್ಯಾಬ್ ನಿಲ್ಲಿಸಿದ್ದ ಚಾಲಕ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ತನಿಖೆಯನ್ನು ಆರಂಭಿಸಿರುವ ಪೋಲಿಸರು ಆರೋಪಿಯ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪೋಲಿಸರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News