ಅಕ್ರಮ ಗಣಿಗಾರಿಕೆ ಪ್ರಕರಣ ; ಸಿಎಂ ಹೇಮಂತ್ ಸೊರೇನ್ ಪತ್ರಿಕಾ ಸಲಹೆಗಾರ, ಇತರರಿಗೆ ಸೇರಿದ ಸ್ಥಳಗಳಿಗೆ ಈಡಿ ದಾಳಿ
Update: 2024-01-03 16:52 GMT
ರಾಂಚಿ: ಜಾರ್ಖಂಡ್ ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ರಿಕಾ ಸಲಹೆಗಾರ, ಸಾಹಿಬ್ಗಂಜ್ ಜಿಲ್ಲೆಯ ಅಧಿಕಾರಿಗಳು ಹಾಗೂ ಮಾಜಿ ಶಾಸಕನಿಗೆ ಸೇರಿದ ಸ್ಥಳಗಳಲ್ಲಿ ಬುಧವಾರ ದಾಳಿ ನಡೆಸಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ರಾಜ್ಯದ 12ಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿ ನಡೆಸಿತು ಎಂದು ಮೂಲಗಳು ತಿಳಿಸಿವೆ.
ಅಭಿಷೇಕ್ ಪ್ರಸಾದ್ ಆಲಿಯಾಸ್ ಪಿಂಟು, ಸಾಹಿಬ್ಗಂಜ್ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕ, ಮಾಜಿ ಶಾಸಕ ಪಪ್ಪು ಯಾದವ್, ಕಾರಾಗೃಹ ಇಲಾಖೆಯ ಕೆಲವು ಅಧಿಕಾರಿಗಳು, ಪೊಲೀಸ್ ಕಾನ್ಸ್ ಟೇಬಲ್ ಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.