"ಜನರ ತೀರ್ಪನ್ನು ಸ್ವೀಕರಿಸುತ್ತೇನೆ": ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಸೋಲೊಪ್ಪಿಕೊಂಡ ಮೆಹಬೂಬ ಮುಫ್ತಿ ಪುತ್ರಿ ಇಲ್ತಿಜಾ
Update: 2024-10-08 06:30 GMT
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಸೋಲೊಪ್ಪಿಕೊಂಡಿದ್ದಾರೆ. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಅವರು 5,000ಕ್ಕೂ ಹೆಚ್ಚು ಮತಗಳಿಂದ ಪರಾಭವಗೊಂಡಿದ್ದಾರೆ.
“ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಬಿಲ್ಬೆಹರಾದಲ್ಲಿ ನಾನು ಜನರಿಂದ ಸ್ವೀಕರಿಸಿರುವ ಪ್ರೀತಿ ಮತ್ತು ಅಕ್ಕರೆ ಎಂದೂ ನನ್ನ ನೆನಪಿನಲ್ಲಿರುತ್ತದೆ. ಇಡೀ ಚುನಾವಣಾ ಪ್ರಚಾರದಲ್ಲಿ ಕಠಿಣ ಪರಿಶ್ರಮ ಹಾಕಿದ ಪಿಡಿಪಿ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಇದೇ ಪ್ರಥಮ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಇಲ್ತಿಜಾ ಮುಫ್ತಿ ಹೇಳಿದ್ದಾರೆ.
ಪಿಡಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಲ್ತಿಜಾ ಮುಫ್ತಿ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಬಶೀರ್ ಅಹ್ಮದ್ ಶಾ ವೀರಿ ಗೆಲುವು ಸಾಧಿಸಿದ್ದಾರೆ.