ಲೋಕಸಭಾ ಚುನಾವಣೆಯಲ್ಲಿ ಶೇ. 50ಕ್ಕಿಂತ ಹೆಚ್ಚು ಮತ ಗಳಿಸುವತ್ತ ಗುರಿ ಇಡಿ: ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಕಿವಿಮಾತು

Update: 2023-12-23 14:36 GMT

ಪ್ರಧಾನಿ ನರೇಂದ್ರ ಮೋದಿ (PTI) 

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ, ಮುಂಬರುವ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ. 50ಕ್ಕಿಂತ ಹೆಚ್ಚು ಮತ ಗಳಿಸುವತ್ತ ಗುರಿ ಇಡಿ ಎಂದು ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ ಎಂದು indiatoday.in ವರದಿ ಮಾಡಿದೆ. 

ಶುಕ್ರವಾರ ಹೊಸ ದಿಲ್ಲಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಆಂತರಿಕ ಸಭೆ ನಡೆಸಿ ಮಾತನಾಡಿದ ಪ್ರಧಾನಿ ಮೋದಿ, ಕಾರ್ಯಾಚರಣೆಯ ಮಾದರಿಯಲ್ಲಿ ಕೆಲಸ ಮಾಡುವಂತೆ ಬಿಜೆಪಿ ನಾಯಕರಿಗೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ ಎಂದು India Today ಸುದ್ದಿ ಸಂಸ್ಥೆ ವರದಿ ಮಾಡಿದೆ. 

 “ನಾವು 2019ರ ಚುನಾವಣೆಯಲ್ಲಿ 303 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ನಾವು ಕಾರ್ಯಾಚರಣೆ ಮಾದರಿಯಲ್ಲಿ ಕೆಲಸ ನಿರ್ವಹಿಸಿದರೆ 2024ರ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಜಯಿಸಬಹುದು” ಎಂದು ಬಿಜೆಪಿ ಪದಾಧಿಕಾರಿಗಳನ್ನುದ್ದೇಶಿಸಿ ಹೇಳಿದ್ದಾರೆ. 

“ನಿಮ್ಮ ದೃಷ್ಟಿಕೋನಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿಯಾಗಿ ಪ್ರಸ್ತುತ ಪಡಿಸಿ ಹಾಗೂ ವಿರೋಧಿಗಳ ನಕಾರಾತ್ಮಕ ಅಪಪ್ರಚಾರಗಳಿಗೆ ವಾಸ್ತವಿಕ ಸತ್ಯಗಳೊಂದಿಗೆ ಸಕಾರಾತ್ಮಕ ಉತ್ತರ ನೀಡಿ” ಎಂದು ಪಕ್ಷದ ಉನ್ನತ ನಾಯಕರಿಗೆ ಅವರು ಸಲಹೆ ನೀಡಿದ್ದಾರೆ. 

ಸಾರ್ವತ್ರಿಕ ಚುನಾವಣೆಗಾಗಿ ಮಾಡಬೇಕಾದ ವ್ಯೂಹ ತಂತ್ರಗಳು ಕುರಿತು ಚರ್ಚಿಸಲು ಆಯೋಜಿಸಲಾಗಿದ್ದ ಎರಡು ದಿನಗಳ ಸಭೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇನ್ನಿತರ ಎಲ್ಲ ಘಟಕಗಳ ಮುಖ್ಯಸ್ಥರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News