ಇಂಡಿಯಾ ಮೈತ್ರಿಕೂಟ ಸರಕಾರ ರಚನೆಯ ಹಕ್ಕು ಪ್ರತಿಪಾದಿಸಬೇಕು: ಉದ್ಧವ್ ಠಾಕ್ರೆ

Update: 2024-06-05 04:18 GMT

 ಉದ್ಧವ್ ಠಾಕ್ರೆ | PTI

ಮುಂಬೈ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗಮನಾರ್ಹ ಪ್ರದರ್ಶನ ತೋರಿರುವ ಹಿನ್ನೆಲೆಯಲ್ಲಿ, ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಸರಕಾರ ರಚನೆಯ ಹಕ್ಕು ಪ್ರತಿಪಾದಿಸಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹತ್ವದ ಹೇಳಿದ್ದಾರೆ.

“ನಾವು ಸರಕಾರ ರಚನೆಯ ಹಕ್ಕು ಪ್ರತಿಪಾದಿಸಬೇಕು. ನಾನು ದಿಲ್ಲಿಗೆ ತೆರಳಲಿದ್ದೇನೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಬಿಜೆಪಿಯು ಮೈತ್ರಿಪಕ್ಷಗಳು ಬಿಜೆಪಿಯ ಬಗ್ಗೆ ಭೀತಿ ಹೊಂದಿರುವುದರಿಂದ ಅದರೊಂದಿಗೆ ಇವೆ ಎಂದು ಆರೋಪಿಸಿರುವ ಅವರು, ಚಂದ್ರಬಾಬು ನಾಯ್ಡು ಅವರಿಗೆ ಬಿಜೆಪಿಯು ಕಿರುಕುಳ ನೀಡುತ್ತಿದೆ ಎಂದೂ ದೂರಿದ್ದಾರೆ.

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಗಮಹಾರ್ಹ ಮುನ್ನಡೆ ದೊರೆತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಕೂಡಾ ಒಂದಾಗಿದ್ದು, ಈ ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟವು 30 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೇವಲ 17 ಸ್ಥಾನಗಳಲ್ಲಿ ಜಯಗಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News