ಸಿಬಿಐ, ಈಡಿ ದುರ್ಬಳಕೆ | ಸೋಮವಾರ ‘ಇಂಡಿಯಾ’ ಮೈತ್ರಿಕೂಟದಿಂದ ಪ್ರತಿಭಟನೆ

Update: 2024-06-30 17:32 GMT

 ಸಂಜಯ್ ಸಿಂಗ್ | PC : PTI

ಹೊಸದಿಲ್ಲಿ : ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿರಿಸಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ(ಈಡಿ)ವನ್ನು ದುರ್ಬಳಕೆ ಮಾಡುತ್ತಿರುವ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸಂಸತ್ ಭವನದಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಆಪ್ ನ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ರವಿವಾರ ಪ್ರಕಟಿಸಿದ್ದಾರೆ.

‘‘ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಅದರ ಪ್ರಧಾನ ತನಿಖಾ ಸಂಸ್ಥೆಗಳು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಮೋದಿ ಅವರು ಪ್ರತಿಪಕ್ಷಗಳ ನಾಯಕರನ್ನು ಗುರಿ ಮಾಡಿದ್ದಾರೆ ಹಾಗೂ ಅವರ ವಿರುದ್ಧ ನಕಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಂದ ಹಿಡಿದು ಮಮತಾ ಬ್ಯಾನರ್ಜಿ ಹಾಗೂ ಡಿಎಂಕೆ ನಾಯಕರ ವರೆಗೆ ಪ್ರತಿಪಕ್ಷದ ಪ್ರತಿಯೊಬ್ಬ ನಾಯಕನ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ(ಈಡಿ) ನಕಲಿ ಪ್ರಕರಣ ದಾಖಲಿಸುತ್ತಿದೆ ಹಾಗೂ ತನಿಖೆ ನಡೆಸುತ್ತಿದೆ” ಎಂದು ಅವರು ಹೇಳಿದರು.

‘‘ಅವರು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸುತ್ತಾರೆ. ವಿರುದ್ಧವಾಗಿ ಮಾತನಾಡುವವರು ಹಾಗೂ ಬಿಜೆಪಿಗೆ ಸೇರದವರ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ(ಈಡಿ) ಕ್ರಮ ಕೈಗೊಳ್ಳುತ್ತದೆ’’ ಎಂದು ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News