ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮಧ್ಯೆ ಸಮುದ್ರದಲ್ಲಿ ಭಾರತೀಯ ನೌಕಾಪಡೆಯಿಂದ ಸಮರಾಭ್ಯಾಸ

Update: 2025-04-27 16:59 IST
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮಧ್ಯೆ ಸಮುದ್ರದಲ್ಲಿ ಭಾರತೀಯ ನೌಕಾಪಡೆಯಿಂದ ಸಮರಾಭ್ಯಾಸ

Photo credit: X/@indiannavy

  • whatsapp icon

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಎದುರಾಳಿ ರಾಷ್ಟ್ರದ ಹಡಗನ್ನು ಉಡಾಯಿಸುವ ಸಾಮರ್ಥ್ಯವಿರುವ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

ಕ್ಷಿಪಣಿ ಪರೀಕ್ಷೆಯ ದೃಶ್ಯಗಳನ್ನು ನೌಕಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಹಡಗು ನಿವಾರಕ ಕ್ಷಿಪಣಿಗಳನ್ನು ಯಶಸ್ವಿಯಾಗಿ ಉಡಾಯಿಸಲಾಗಿದೆ. ಆ ಮೂಲಕ ನಿಖರವಾದ ಮತ್ತು ಆಕ್ರಮಣಕಾರಿ ಮುಷ್ಕರಕ್ಕೆ ನೌಕಪಡೆ ಮತ್ತು ಸಿಬ್ಬಂದಿಗಳು ಸನ್ನದ್ಧರಾಗಿರುವುದಾಗಿ ತಿಳಿಸಿದೆ.

ಭಾರತೀಯ ನೌಕಾಪಡೆಯು ಯಾವುದೇ ಸಮಯದಲ್ಲಾದರೂ, ಎಲ್ಲಿಯೇ ಆದರೂ ಜಲಮಾರ್ಗದ ಮೂಲಕ ನಡೆಸುವ ದಾಳಿಯನ್ನು ಎದುರಿಸಲು ಸದಾ ಸನ್ನದ್ಧವಾಗಿದೆ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News