ಇಂಡೋನೇಶ್ಯ ಅಧ್ಯಕ್ಷ ಸುಬಿಯಾನೊ ಗಣರಾಜ್ಯೋತ್ಯವಕ್ಕೆ ಮುಖ್ಯ ಅತಿಥಿ ಸಾಧ್ಯತೆ

Update: 2025-01-12 15:43 GMT

ಜಕಾರ್ತ: ಇಂಡೋನೇಶ್ಯ ಅಧ್ಯಕ್ಷ ಪ್ರಬೊವೊ ಸುಬಿಯಾನೊ ಹೊಸದಿಲ್ಲಿಯ ಕೆಂಪುಕೋಟೆಯಲ್ಲಿ ನಡೆಯುವ ಈ ಸಲದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.

ಆದಾಗ್ಯೂ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿ ಯಾರೆಂಬುದನ್ನು ಕೇಂದ್ರ ಸರಕಾರವು ಅಧಿಕೃತವಾಗಿ ಘೋಷಿಸಿಲ್ಲ. ಸುಬಿಯಾಂತೊ ಅವರ ಭಾರತ ಭೇಟಿಯ ಸಂದರ್ಭದಲ್ಲಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಸ್ತೃತವಾದ ಮಾತುಕತೆಗಳನ್ನು ನಡೆಸಲಿದ್ದಾರೆ.

ಪ್ರತಿ ವರ್ಷವೂ ಭಾರತವು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಿದೇಶಿ ಗಣ್ಯರನ್ನ ಆಹ್ವಾನಿಸುತ್ತದೆ. ಕಳೆದ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಿನ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಆಗಮಿಸಿದ್ದರು. 2023ರಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಹ ಅಲ್‌ಸಿಸಿ ಮುಖ್ಯ ಅತಿಥಿಯಾಗಿದ್ದರು. ಕೋವಿಡ್ 19 ಸಾಂಕ್ರಾಮಿಕದ ಹಾವಳಿಯ ಹಿನ್ನೆಲೆಯಲ್ಲಿ 2021 ಹಾಗೂ 2022ರಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ. ಅತಿಥಿಯಾಗಿ ಭಾರತವು ಯಾರನ್ನೂ ಆಹ್ವಾನಿಸಿರಲಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News