ಕಣ್ಣು ಕೆಕ್ಕರಿಸಿ ಇತರರನ್ನು ಬೆದರಿಸುವುದು ಕಾಂಗ್ರೆಸ್ ಪಕ್ಷದ ವಿಶಿಷ್ಟ ಸಂಸ್ಕೃತಿ : ಪ್ರಧಾನಿ ಮೋದಿ ವಾಗ್ದಾಳಿ

Update: 2024-03-28 16:57 GMT

ನರೇಂದ್ರ ಮೋದಿ, ಡಿ.ವೈ.ಚಂದ್ರಚೂಡ್ | Photo: PTI 

ಹೊಸ ದಿಲ್ಲಿ: ನ್ಯಾಯಾಂಗದ ಮೇಲೆ ಒತ್ತಡ ಹೇರಲು ಪಟ್ಟಭದ್ರ ಹಿತಾಸಕ್ತಿಗಳು ಒತ್ತಡ ಹೇರುತ್ತಿವೆ ಎಂದು ಆರೋಪಿಸಿ ಸುಮಾರು 600 ವಕೀಲರು ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದ ಬೆನ್ನಿಗೇ, ತನ್ನ ಸ್ವಾರ್ಥ ಹಿತಾಸಕ್ತಿಗಾಗಿ ಇತರರಿಂದ ಯಾವುದೇ ನಾಚಿಕೆ ಇಲ್ಲದೆ ಕಾಂಗ್ರೆಸ್ ಬದ್ಧತೆಯನ್ನು ಬಯಸುತ್ತಿದೆ ಎಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಕಣ್ಣು ಕೆಕ್ಕರಿಸಿ ಇತರರನ್ನು ಬೆದರಿಸುವುದು ಕಾಂಗ್ರೆಸ್ ಪಕ್ಷದ ವಿಶಿಷ್ಟ ಸಂಸ್ಕೃತಿಯಾಗಿದೆ” ಎಂದೂ ಅವರು ವಿರೋಧ ಪಕ್ಷವಾದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದ ಸುಮಾರು 600 ವಕೀಲರು, “ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಹಲವಾರು ವಿಧದಲ್ಲಿ ಕಾರ್ಯಾಚರಿಸುತ್ತಿವೆ. ಭೂತಕಾಲದ ಉತ್ತಮ ಅವಧಿ ಹಾಗೂ ಸುವರ್ಣ ಯುಗದ ಕುರಿತು ಸುಳ್ಳು ಪ್ರತಿಪಾದನೆ ಮಾಡಲು ಹಾಲಿ ನಡೆಯುತ್ತಿರುವುದನ್ನು ಹೋಲಿಕೆ ಮಾಡಲಾಗುತ್ತಿದೆ. ಇದರಲ್ಲಿ ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಹಾಗೂ ನಿರ್ದಿಷ್ಟ ರಾಜಕೀಯ ಲಾಭಕ್ಕಾಗಿ ನ್ಯಾಯಾಲಯಗಳಿಗೆ ಮುಜುಗರವನ್ನುಂಟು ಮಾಡುವ ಉದ್ದೇಶಪೂರ್ವಕ ಭಾವನೆಗಳಲ್ಲದೆ ಮತ್ತೇನೂ ಇಲ್ಲ” ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದರು.

ತಮ್ಮ ವೈಯಕ್ತಿಕ ಹಾಗೂ ರಾಜಕೀಯ ಕಾರಣಗಳಿಗಾಗಿ ನ್ಯಾಯಾಲಯಗಳನ್ನು ತುಚ್ಛೀಕರಿಸುವ ಮತ್ತು ತಿರುಚುವ ಕೆಲಸವನ್ನು ಮಾಡಲಾಗುತ್ತಿದೆ ಎಂದೂ ಆರೋಪಿಸಿದ್ದ ಅವರು, ಈ ಕುರಿತು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News