ಜಮ್ಮುಕಾಶ್ಮೀರ | ಗುಂಡಿನ ಕಾಳಗ ಮೂವರು ಶಂಕಿತ ಉಗ್ರರ ಸಾವು

Update: 2024-09-11 16:08 GMT

ಸಾಂದರ್ಭಿಕ ಚಿತ್ರ  |  PC : PTI 

ಜಮ್ಮು : ಜಮ್ಮು ಹಾಗೂ ಕಾಶ್ಮೀರದ ಉಧಮ್‌ಪುರ ಪ್ರದೇಶದ ಕಥುವಾ-ಬಸಂತ್‌ಗಢ ಗಡಿಯಲ್ಲಿ ಶಂಕಿತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಶಂಕಿತ ಉಗ್ರರು ಹತರಾಗಿದ್ದಾರೆ.

ಖಚಿತ ಬೇಹುಗಾರಿಕೆ ಮಾಹಿತಿ ಆಧಾರದಲ್ಲಿ ಭದ್ರತಾ ಪಡೆ ಕಥುವಾದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ಕಥುವಾ-ಬಸಂತಗಢ ಗಡಿಯಲ್ಲಿ ಶಂಕಿತ ಉಗ್ರರೊಂದಿಗೆ ಗುಂಡಿನ ಕಾಳಗ ನಡೆಯಿತು ಎಂದು ಜಮ್ಮು ಸೇನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಜಮ್ಮು ಗಡಿಯಲ್ಲಿ ಇದು ಮುಂಜಾನೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಅಂತರರಾಷ್ಟ್ರೀಯ ಗಡಿ ಸಮೀಪದ ಅಕ್ನೂರ್ ವಲಯದಲ್ಲಿ ಪಾಕಿಸ್ತಾನದ ಕಡೆಯಿಂದ ನಡೆದ ಅಪ್ರಚೋದಿತ ಗುಂಡಿನ ದಾಳಿಯಿಂದ ಓರ್ವ ಯೋಧ ಗಾಯಗೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ 3 ಹಂತದಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆ ಸೆಪ್ಟಂಬರ್ 18ರಿಂದ ಆರಂಭವಾಗಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News