ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಕುರಿತು ಸೂಕ್ತ ಸಮಯದಲ್ಲಿ ಕೇಂದ್ರ ಸ್ಪಂದಿಸಲಿದೆ : ಸಚಿವ ಕಿಶನ್ ರೆಡ್ಡಿ

Update: 2024-10-11 14:31 GMT

ಸಚಿವ ಕಿಶನ್ ರೆಡ್ಡಿ | PC ; PTI 

ಹೈದರಾಬಾದ್ : ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪನೆ ಮಾಡಬೇಕು ಎಂಬ ಬೇಡಿಕೆಯ ಕುರಿತು ಕೇಂದ್ರ ಸರಕಾರವು ಸೂಕ್ತ ಸಮಯದಲ್ಲಿ ಸ್ಪಂದಿಸಲಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ.

ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಿ 370 ಅನ್ನು ಮರುಸ್ಥಾಪಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಸಂದರ್ಭದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರು ಸ್ಥಾಪಿಸಬೇಕು ಎಂಬ ನ್ಯಾಷನಲ್ ಕಾನ್ಫರೆನ್ಸ್ ಬೇಡಿಕೆಯ ಕುರಿತು ಪ್ರತಿಕ್ರಿಯಿಸುತ್ತಿದ್ದರು.

ಕೇಂದ್ರ ಸರಕಾರದ ಪ್ರಯತ್ನದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆಯಿತು. ಮರು ಮತದಾನ ನಡೆಸಬೇಕಾದ ಅವಶ್ಯಕತೆ ಬೀಳಲಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿಯ ಉಸ್ತುವಾರಿಯಾಗಿದ್ದ ಕಿಶನ್ ರೆಡ್ಡಿ ಅಭಿಪ್ರಾಯ ಪಟ್ಟಿದ್ದಾರೆ.

ಬಿಜೆಪಿಯ ಸಾಧನೆ ಗಮನಾರ್ಹವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಜಯಿಸಿದೆ ಎಂದೂ ಅವರು ಪ್ರತಿಪಾದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News