ಜಮ್ಮುಕಾಶ್ಮೀರ: ಉಸಿರುಗಟ್ಟಿ ಕುಟುಂಬದ ಐವರು ಮೃತ್ಯು
Update: 2025-01-06 15:13 GMT
ಶ್ರೀನಗರ : ಜಮ್ಮುಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ರವಿವಾರ ಒಂದೇ ಕುಟುಂಬದ ಐವರು ತಮ್ಮ ಮನೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಪಂಡ್ರಾಥಾನ್ ಪ್ರದೇಶಲ್ಲಿ ಈ ಘಟನೆ ಸಂಭವಿಸಿದ್ದು,ದಂಪತಿ ಮತ್ತು ಅವರ ಮೂವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಮೂಲತಃ ಬಾರಾಮುಲ್ಲಾ ಜಿಲ್ಲೆಯ ಕುಟುಂಬವು ಪಂಡ್ರಾಥಾನ್ ಪ್ರದೇಶದಲ್ಲಿಯ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಉಸಿರುಗಟ್ಟುವಿಕೆಯಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು,ಎಲ್ಲರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದರು.
ಈ ದುರಂತದ ಬಗ್ಗೆ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ.