ಜಮ್ಮು-ಕಾಶ್ಮೀರ ಚುನಾವಣೆ: ಎರಡನೇ ಹಂತದ ಮತದಾನ ಆರಂಭ

Update: 2024-09-25 04:59 GMT

PC: x.com/NewIndianXpress

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಎರಡನೇ ಹಂತದ ಮತದಾನ ಆರಂಭವಾಗಿದ್ದು, ಆರು ಜಿಲ್ಲೆಗಳ 26 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಸರಿಸುಮಾರು 26 ಲಕ್ಷ ಮತದಾರರು ಇಂದು 239 ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆಯಲ್ಲಿ ಭದ್ರಗೊಳಿಸಲಿದ್ದಾರೆ.

ಕಂಗನ್, ಗಂದರ್‌ಬಾಲ್, ಹಜರತ್‌ಬಾಲ್, ಖಾನ್ಯಾರ್, ಹಬ್ಬಕದಲ್, ಲಾಲ್ ಚೌಕ್, ಚನ್ನಪೋರಾ, ಝಡಿಬಲ್, ಈದ್ಗಾ, ಸೆಂಟ್ರಲ್ ಶಾಲ್ತೆಂಗ್, ಬುಡ್ಗಾಮ್, ಬೀರ್ವಾ, ಖಾನ್‌ಸಾಹಿಬ್, ಚ್ರಾರ್-ಐ-ಶರೀಫ್, ಚದೂರ ಮತ್ತು ಗುಲಾಬ್‌ಗಢ್, ರಿಯಾಸಿ, ಶ್ರೀ ಮಾತಾ ವೈಷ್ಣೋ ದೇವಿ, ಕಲಕೋಟೆ, ಸುಂದರ್‌ಬನಿ, ನೌಶೇರಾ, ರಾಜೌರಿ, ಬುಧಾಲ್, ತನ್ನಮಂಡಿ (ಎಸ್‌ಟಿ), ಸುರನ್‌ಕೋಟೆ (ಎಸ್‌ಟಿ), ಪೂಂಚ್ ಹವೇಲಿ ಮತ್ತು ಮೆಂಧರ್ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಉಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಸೇರಿ 239 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಸೆ.18ರಂದು ನಡೆದಿದ್ದು, ಮೊದಲ ಹಂತದ ಚುನಾವಣೆಯಲ್ಲಿ 7 ಜಿಲ್ಲೆಗಳ 24 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News