ಜಮ್ಮು-ಕಾಶ್ಮೀರ: ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಪಟ್ಟಣದಲ್ಲಿ ಮಂಗಳವಾರ ಸಂಜೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ವಲಸಿಗ ಕಾರ್ಮಿಕರು ಗಾಯಗೊಂಡಿದ್ದಾರೆ.
ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
"ಅನಂತ್ನಾಗ್ ನಲ್ಲಿ ಇಬ್ಬರು ಹೊರಗಿನ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ನಾಗರಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಸ್ಥಿರರಾಗಿದ್ದಾರೆ ಎಂದು ಹೇಳಲಾಗಿದೆ. ಪ್ರದೇಶವನ್ನು ಶೋಧ ಕಾರ್ಯಾಚರಣೆಗಾಗಿ ಸುತ್ತುವರಿಯಲಾಗಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಕಳೆದ ಐದು ದಿನಗಳಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ.
ಈ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿತ್ತು.