ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ | ಕೊನೆಯ ಹಂತದ ಮತದಾನ ಆರಂಭ

Update: 2024-10-01 05:16 GMT

Photo : x/@timesofindia

ಶ್ರೀನಗರ : ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆ ಕೊನೆಯ ಮತ್ತು 3ನೇ ಹಂತದ ಮತದಾನ ಮಂಗಳವಾರ ಪ್ರಾರಂಭವಾಗಿದ್ದು, 7 ಜಿಲ್ಲೆಗಳ 40 ಸ್ಥಾನಗಳಿಗೆ ಬಿರುಸಿನ ಮತದಾನ ನಡೆಯುತ್ತಿದೆ.

ಬೆಳಗ್ಗೆ 7 ಗಂಟೆಗೆ ಬಿಗಿ ಭದ್ರತೆಯ ನಡುವೆ ಮತದಾನ ಆರಂಭವಾಗಿದೆ. 3ನೇ ಹಂತದಲ್ಲಿ 39.18 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, 415 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರಗೊಳಿಸುತ್ತಿದ್ದಾರೆ.

ಬಾರಾಮುಲ್ಲಾ, ಉರಿ, ರಫಿಯಾಬಾದ್, ಪಟ್ಟನ್, ಗುಲ್ಮಾರ್ಗ್, ಸೋಪೋರ್, ವಗೂರಾ-ಕ್ರೀರಿ, ಕುಪ್ವಾರಾ, ಕರ್ನಾಹ್, ಟ್ರೆಹ್ಗಾಮ್, ಹಂದ್ವಾರಾ, ಲೋಲಾಬ್ ಮತ್ತು ಲ್ಯಾಂಗೇಟ್, ಬಂಡಿಪೋರಾ, ಸೋನಾವರಿ ಮತ್ತು ಗುರೇಜ್ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಈ 16 ಕ್ಷೇತ್ರಗಳಲ್ಲಿ ಒಟ್ಟು 202 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಅರೆಸೈನಿಕ ಮತ್ತು ಸಶಸ್ತ್ರ ಪೊಲೀಸ್ ಪಡೆ ಸೇರಿದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.

ಸೆ. 18ರಂದು ನಡೆದಿದ್ದ ಮೊದಲ ಹಂತದ ಚುನಾವಣೆಯಲ್ಲಿ 61.38% ಮತ್ತು ಸೆ.25ರಂದು ನಡೆದ 2ನೇ ಹಂತದ ಚುನಾವಣೆಯಲ್ಲಿ 57.31% ಮತದಾನವಾಗಿತ್ತು.

ಅ.8 ರಂದು ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News