ನಾಳೆಯಿಂದ ರಾಷ್ಟ್ರಪತಿ ಜಾರ್ಖಂಡ್ ಭೇಟಿ

Update: 2024-10-24 15:00 GMT

 ದ್ರೌಪದಿ ಮುರ್ಮು | PC : PTI  

ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರದಿಂದ ಎರಡು ದಿನ ಚತ್ತೀಸ್‌ಗಢಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಅವರು ನಾಲ್ಕು ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರ ಭೇಟಿಯ ಹಿನ್ನೆಲೆಯಲ್ಲಿ ರಾಯಪುರ ಹಾಗೂ ದುರ್ಗ್ ಜಿಲ್ಲೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಶುಕ್ರವಾರ ಹಾಗೂ ಶನಿವಾರ ವಾಹನಗಳ ಸಂಚಾರ ಪಥ ಬದಲಾಯಿಸಲಾಗಿದೆ.

ಮುರ್ಮು ಅವರು ಶುಕ್ರವಾರ ಬೆಳಗ್ಗೆ ರಾಯಪುರದಲ್ಲಿರುವ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಗೆ ತೆರಳಲಿದ್ದಾರೆ. ಅಲ್ಲಿ ಅದರ 2ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸರಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಅನಂತರ ಅವರು ರಾಜ ಭವನಕ್ಕೆ ತೆರಳಿದ್ದಾರೆ. ಬಳಿಕ ರಾಯ್‌ಪುರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 14ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುರ್ಮು ಅವರು ನವ ರಾಯಪುರದಲ್ಲಿರುವ ‘ಪುರ್ಖೌಟಿ ಮುಖ್ಟ್ಟಾಂಗನ್’ (ಬುಡಕಟ್ಟು ವಸ್ತು ಸಂಗ್ರಹಾಲಯ)ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಸ್ಥಳೀಯ ಬುಡಕಟ್ಟು ಜನರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಮುರ್ಮು ಅವರು ಇಲ್ಲಿನ ಗಾಯತ್ರಿ ನಗರದಲ್ಲಿರುವ ಜಗನ್ನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಅನಂತರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಿಲಾಯಿಗೆ ತೆರಳಲಿದ್ದಾರೆ. ಬಿಲಾಯಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ನಾಲ್ಕನೇ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News