ಜಾರ್ಖಂಡ್ | ಬಿಜೆಪಿಗೆ ಬಂಡಾಯದ ಬಿಸಿ ; 30 ಅಭ್ಯರ್ಥಿಗಳ ಉಚ್ಚಾಟನೆ
Update: 2024-11-05 13:38 GMT
ರಾಂಚಿ: ಜಾರ್ಖಂಡ್ ನಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ 30 ನಾಯಕರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಜಾರ್ಖಂಡ್ ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದಂತೆ ಪ್ರಧಾನ ಕಾರ್ಯದರ್ಶಿ ಡಾ.ಪ್ರದೀಪ್ ವರ್ಮಾ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ 30 ಬಂಡಾಯ ನಾಯಕರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪಕ್ಷದ ನೀತಿಗಳಿಗೆ ವಿರುದ್ಧವಾಗಿ ನಡೆದುಕೊಂಡ ಚಂದ್ರಮಾ ಕುಮಾರಿ, ಕುಂಕುಮ್ ದೇವಿ, ಜೂಲಿ ಯಾದವ್, ಲಕ್ಷ್ಮೀದೇವಿ, ಬಲವಂತ್ ಸಿಂಗ್, ಅರವಿಂದ್ ಸಿಂಗ್, ಹಜಾರಿ ಪ್ರಸಾದ್ ಸೇರಿದಂತೆ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.