ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆ; ಲೆಫ್ಟಿನೆಂಟ್ ಗವರ್ನರ್ ಗೆ ಐವರು ಶಾಸಕರ ನಾಮನಿರ್ದೇಶನ ವಿಶೇಷಾಧಿಕಾರ: ವಿಪಕ್ಷಗಳ ಕಳವಳ

Update: 2024-10-08 04:14 GMT

ಮನೋಜ್ ಸಿನ್ಹಾ (Photo credit: PTI)

ಹೊಸದಿಲ್ಲಿ: ಜಮ್ಮು-ಕಾಶ್ಮೀರ ವಿಧಾನಸಭೆಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಲು ಲೆಫ್ಟಿನೆಂಟ್ ಗವರ್ನರ್ ಗೆ ವಿಶೇಷ ಅಧಿಕಾರ ನೀಡಿರುವುದು ಮತ ಎಣಿಕೆ ಸಂದರ್ಭದಲ್ಲಿ ವಿಪಕ್ಷಗಳ ಕಳವಳಕ್ಕೆ ಕಾರಣವಾಗಿದೆ.

ಕಾಂಗ್ರೆಸ್, ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಲೆಫ್ಟಿನೆಂಟ್ ಗವರ್ನರ್ಗೆ ಇಂತಹ ವಿಶೇಷ ಅಧಿಕಾರಗಳನ್ನು ನೀಡುವುದು ಜನರ ಆದೇಶವನ್ನು ಉಲ್ಲಂಘಿಸಿದಂತೆ ಎಂದು ಹೇಳುತ್ತಿದ್ದು, ಇದು ಬಿಜೆಪಿಗೆ ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಈವೆರೆಗೆ ಸ್ವಂತ ಬಲದಿಂದ ಆಡಳಿತ ನಡೆಸಿಲ್ಲ. 2014ರ ಚುನಾವಣೆಯ ನಂತರ ಅದು PDPಯೊಂದಿಗೆ ಸರ್ಕಾರವನ್ನು ರಚಿಸಿತ್ತು, ಆದರೆ 2018ರಲ್ಲಿ ಮೈತ್ರಿಯಿಂದ ಹೊರಬಂದಿದೆ. ಇದಾದ ಬಳಿಕ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತ್ತು.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಲು ವಿಶೇಷ ಅಧಿಕಾರವನ್ನು ನೀಡಿರುವುದು ರಾಜ್ಯದಲ್ಲಿ ಬಿಜೆಪಿಗೆ ಸಹಕಾರಿಯಾಗಲಿದೆ ಎಂದು ಪ್ರತಿಪಕ್ಷಗಳು ಅಭಿಪ್ರಾಯಪಟ್ಟಿದೆ.

ಜಮ್ಮು-ಕಾಶ್ಮೀರ ವಿಧಾನಸಭೆಗೆ ಐವರು ಶಾಸಕರನ್ನು ನಾಮನಿರ್ದೇಶನ ಮಾಡುವ ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆಗೆ ನಾಮನಿರ್ದೇಶನಗಳನ್ನು ಮಾಡಲು ಲೆಫ್ಟಿನೆಂಟ್ ಗವರ್ನರ್ ಅಧಿಕಾರವಿಲ್ಲ. ಜನರ ಆದೇಶವನ್ನು ಗೌರವಿಸಬೇಕು, ಚುನಾವಣಾ ಪ್ರಕ್ರಿಯೆಯು ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿರಬೇಕು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಉಮರ್ ಅಬ್ದುಲ್ಲಾ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News