ಜೋ ಬೈಡೆನ್ ಗಣರಾಜ್ಯೋತ್ಸವಕ್ಕೆ ಭಾಗವಹಿಸುವ ಸಾಧ್ಯತೆಯಿಲ್ಲ

Update: 2023-12-12 17:04 GMT

ಜೋ ಬೈಡೆನ್ | Photo: PTI 

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿಲ್ಲ ಎಂದು ಬಲ್ಲ ಮೂಲಗಳು ಮಂಗಳವಾರ ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರು 2024,ಜ.26ರಂದು ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಬೈಡೆನ್ರನ್ನು ಆಹ್ವಾನಿಸಿದ್ದಾರೆ ಎಂದು ಭಾರತಕ್ಕೆ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ಸೆಪ್ಟಂಬರ್ ನಲ್ಲಿ ತಿಳಿಸಿದ್ದರು.

ಆದರೆ ಆಹ್ವಾನದ ಬಗ್ಗೆ ಭಾರತವು ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ. ಪ್ರತ್ಯೇಕವಾಗಿ, 2024ರ ಉತ್ತರಾರ್ಧದಲ್ಲಿ ಭಾರತದಲ್ಲಿ ಕ್ವಾಡ್ ಶೃಂಗಸಭೆಯನ್ನು ಆಯೋಜಿಸುವ ಪ್ರಸ್ತಾವವಿದೆ ಎಂದು ಈ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News