ʼಶಾಂತಿಯುತವಾಗಿ ಅಧಿಕಾರ ಹಸ್ತಾಂತರಿಸುತ್ತೇನೆʼ: ಟ್ರಂಪ್ ಗೆಲುವಿನ ಬಳಿಕ ಜೋ ಬೈಡನ್ ಮೊದಲ ಪ್ರತಿಕ್ರಿಯೆ

Update: 2024-11-08 10:21 GMT

ಜೋ ಬೈಡನ್ | PC :  PTI 

ಅಮೆರಿಕ: ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಹಾಲಿ ಅಧ್ಯಕ್ಷ ಜೋ ಬೈಡನ್ ದೇಶದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸುವ ದಿನ ಶಾಂತಿಯುತವಾಗಿ ಅಧಿಕಾರ ಹಸ್ತಾಂತರಿಸವುದಾಗಿ ಭರವಸೆ ನೀಡಿದ್ದಾರೆ.

2025ರ ಜನವರಿ 20ರಂದು ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವಿನ ಬಳಿಕ ಮೊದಲ ಬಾರಿಗೆ ಮಾತನಾಡಿದ ಜೋ ಬೈಡನ್, ಕಮಲಾ ಹ್ಯಾರಿಸ್ ಅವರನ್ನು ಕೂಡ ಪ್ರಶಂಸಿಸಿದ್ದು,ಅವರು ಸಂಪೂರ್ಣವಾದ ಪ್ರಯತ್ನವನ್ನು ಮಾಡಿದ್ದಾರೆ. ಅವರು ಮತ್ತು ಅವರ ಸಂಪೂರ್ಣ ತಂಡದ ಅಭಿಯಾನದ ಬಗ್ಗೆ ಹೆಮ್ಮೆ ಪಡಬೇಕು ಎಂದು ಹೇಳಿದ್ದಾರೆ.

ನಿನ್ನೆ, ನಾನು ಅಧ್ಯಕ್ಷರಾಗಿ ಚುನಾಯಿತರಾದ ಟ್ರಂಪ್ ಅವರ ಜೊತೆ ಮಾತನಾಡಿ ಅಭಿನಂದನೆ ಸಲ್ಲಿಸಿದ್ದೇನೆ, ಶಾಂತಿಯುತ ಮತ್ತು ಕ್ರಮಬದ್ಧವಾದ ಅಧಿಕಾರದ ಹಸ್ತಾಂತರದ ಬಗ್ಗೆ ನಾನು ಅವರಿಗೆ ಭರವಸೆ ನೀಡಿದ್ದೇನೆ ಎಂದು ಜೋ ಬೈಡನ್ ಹೇಳಿದ್ದಾರೆ. ದೇಶದ ಜನರು ಮಾಡಿದ ಆಯ್ಕೆಯನ್ನು ನಾವು ಒಪ್ಪಿಕೊಳ್ಳುತ್ತೇವೆ. ನಾನು ಅಧ್ಯಕ್ಷನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುತ್ತೇನೆ. ನಾನು ಸಂವಿಧಾನವನ್ನು ಗೌರವಿಸುತ್ತೇನೆ. ಜನವರಿ 20ರಂದು ಅಮೆರಿಕದಲ್ಲಿ ಶಾಂತಿಯುತವಾಗಿ ಅಧಿಕಾರ ಹಸ್ತಾಂತರವಾಗಲಿದೆ ಎಂದು ಜೋ ಬೈಡನ್ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ 295 ಮತಗಳನ್ನು ಪಡೆಯುವ ಮೂಲಕ ಡೊನಾಲ್ಡ್ ಟ್ರಂಪ್ ಬಹುಮತದ 270ರ ಅಂಕವನ್ನು ದಾಟಿದ್ದಾರೆ. ಕಮಲಾ ಹ್ಯಾರಿಸ್ ಅವರು 226 ಅಂಕಗಳಿಗೆ ತೃಪ್ತಿ ಪಡುವಂತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News