ಕಾನ್ಪುರ ಹಿಂಸಾಚಾರ: 32 ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ನಿರ್ದೇಶಿಸಿದ ಉತ್ತರ ಪ್ರದೇಶ ಸರಕಾರ

Update: 2024-10-12 10:51 GMT

ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್‌ (Photo: PTI)

ಉತ್ತರಪ್ರದೇಶ: 2015ರ ಕಾನ್ಪುರ ಕೋಮು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ 32 ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವಂತೆ ಉತ್ತರಪ್ರದೇಶ ಸರಕಾರವು ಕಾನ್ಪುರ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.

ಪ್ರಕರಣದ 32 ಆರೋಪಿಗಳಲ್ಲಿ ಎಲ್ಲರೂ ಹಿಂದುತ್ವ ಸಂಘಟನೆಗೆ ಸೇರಿದವರಾಗಿದ್ದಾರೆ. ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ.

ಕಾನ್ಪುರ ಜಿಲ್ಲಾಡಳಿತಕ್ಕೆ ಈ ಕುರಿತು ನಿರ್ದೇಶನವನ್ನು ನೀಡಿರುವುದು ದೃಢವಾಗಿದೆ. ಪ್ರಕರಣವನ್ನು ಹಿಂಪಡೆಯಲು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲು ನಮಗೆ ಸೂಚನೆ ನೀಡುವ ಪತ್ರವನ್ನು ನಾವು ಸ್ವೀಕರಿಸಿದ್ದೇವೆ. ಆದರೆ, ನಾವು ಇನ್ನೂ ಅರ್ಜಿ ಸಲ್ಲಿಸಿಲ್ಲ. ಅ.8ರಂದು ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಅವರು ಈ ಕುರಿತು ಪತ್ರವನ್ನು ಕಳುಹಿಸಿದ್ದಾರೆ ಎಂದು ಸರಕಾರಿ ಮೂಲಗಳನ್ನು ಉಲ್ಲೇಖಿಸಿ indianexpress.com ವರದಿ ಮಾಡಿದೆ.

ಇದಕ್ಕೂ ಮುನ್ನ ಸರ್ಕಾರವು ಪ್ರಕರಣದ ಬಗ್ಗೆ ವಿವರಗಳನ್ನು ಹಾಗೂ ಪೊಲೀಸ್ ಮತ್ತು ಜಿಲ್ಲಾಡಳಿತದಿಂದ ಅಭಿಪ್ರಾಯವನ್ನು ಕೇಳಿತ್ತು. ಈ ಪ್ರಕರಣವು 2015ರ ಅ. 24ರಂದು ಕಾನ್ಪುರದ ಫಜಲ್ಗಂಜ್ ಪ್ರದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದೆ. ಮೊಹರಂ ಮೆರವಣಿಗೆಯ ಸಮಯದಲ್ಲಿ ಧಾರ್ಮಿಕ ಪೋಸ್ಟರ್ ಅನ್ನು ಹರಿದು ಹಾಕಲಾಗಿದೆ ಎಂದು ಆರೋಪಿಸಿ ಹಿಂಸಾಚಾರ ಭುಗಿಲೆದ್ದಿತ್ತು. ಆ ಬಳಿಕ ಹಿಂಸಾಚಾರವು ಕಾನ್ಪುರದ ಇತರ ಭಾಗಗಳಿಗೆ ಹರಡಿತ್ತು.

Full View

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News