ವೈದ್ಯರೊಂದಿಗೆ ಸಮಾಲೋಚಿಸಲು ಅನುಮತಿ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ ಕೇಜ್ರಿವಾಲ್

Update: 2024-04-16 16:59 GMT

ಅರವಿಂದ್ ಕೇಜ್ರಿವಾಲ್ | PC : PTI  

ಹೊಸದಿಲ್ಲಿ : ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ತನ್ನ ವೈದ್ಯರೊಂದಿಗೆ ಸಮಾಲೋಚಿಸಲು ಅನುಮತಿ ನೀಡುವಂತೆ ಕೋರಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಕೇಜ್ರಿವಾಲ್ ಪರವಾಗಿ ನ್ಯಾಯಾಲಯಲ್ಲಿ ಹಾಜರಾಗಿದ್ದ ವಕೀಲ ವಿವೇಕ್ ಜೈನ್, ಅವರ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರುಪೇರಾಗುತ್ತಿದೆ. ಅಲ್ಲದೆ, 46ಕ್ಕೆ ಇಳಿಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ವಾರಕ್ಕೆ ಮೂರು ಬಾರಿ ತಮ್ಮ ವೈದ್ಯರೊಂದಿಗೆ ಸಮಾಲೋಚಿಸಲು ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿದರು.

ಈ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ವಿಶೇಷ ನ್ಯಾಯಾಧೀಶ ರಾಕೇಶ್ ಸ್ಯಾಲ್ ಅವರು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದರು. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಎಪ್ರಿಲ್ 18ಕ್ಕೆ ನಿಗದಿಪಡಿಸಿದರು.

ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಸೋಮವಾರ ಎಪ್ರಿಲ್ 23ರ ವರೆಗೆ ವಿಸ್ತರಿಸಿತ್ತು. 

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News