ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 2ರವರೆಗೆ ವಿಸ್ತರಣೆ
Update: 2024-08-13 16:00 GMT
ಹೊಸದಿಲ್ಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಕಪ್ಪುಹಣ ಬಿಳುಪು ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ.ಕವಿತಾ ಮತ್ತಿತರರಿಗೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಮಂಗಳವಾರ ಇಲ್ಲಿನ ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿದೆ.
ಈ ಮೊದಲು ಆರೋಪಿಗಳಿಗೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಅವರನ್ನು ವೀಡಿಯೊ ಕಾನ್ಫರನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಜ್ರಿವಾಲ್, ಕವಿತಾ ಸೇರಿದಂತೆ ಆರೋಪಿಗಳ ನ್ಯಾಯಾಂಗಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದರು.