ಆನೆಗಳನ್ನು ರಕ್ಷಿಸದಿದ್ದರೆ, ಮುಂದಿನ ತಲೆಮಾರು ಆನೆಯನ್ನು ವಸ್ತು ಸಂಗ್ರಹಾಲಯದಲ್ಲಿ ನೋಡಬೇಕಾಗುತ್ತದೆ : ಕೇರಳ ಹೈಕೋರ್ಟ್ ಕಳವಳ

Update: 2024-11-05 15:38 GMT
ಕೇರಳ ಹೈಕೋರ್ಟ್ | PC : PTI

ತಿರುವನಂತಪುರಂ : ಆನೆಗಳನ್ನು ಸಂರಕ್ಷಿಸದಿದ್ದರೆ, ನಾವು ಡೈನೋಸಾರ್ ಗಳನ್ನು ನೋಡುತ್ತಿರುವಂತೆ ಮುಂದಿನ ತಲೆಮಾರು ಆನೆಯನ್ನು ವಸ್ತು ಸಂಗ್ರಹಾಲಯದಲ್ಲಿ ನೋಡಬೇಕಾಗುತ್ತದೆ ಎಂದು ಕೇರಳ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಸೆರೆಯಲ್ಲಿರುವ ಆನೆಗಳ ಮೇಲೆ ನಡೆಯುವ ಕ್ರೌರ್ಯವನ್ನು ನಿಷೇಧಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

ಆನೆಗಳ ಮೇಲಿನ ಕ್ರೌರ್ಯವನ್ನು ತಡೆಯಲು, ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ನಡೆಯುವ ಮೆರವಣಿಗೆ ಸಂದರ್ಭದಲ್ಲಿನ ಕ್ರೌರ್ಯವನ್ನು ತಡೆಯಲು ಮಾರ್ಗಸೂಚಿಗಳನ್ನು ರಚಿಸುವ ಇಂಗಿತ ವ್ಯಕ್ತಪಡಿಸಿದ ಹೈಕೋರ್ಟ್, ಯಾವುದೇ ವ್ಯಕ್ತಿ ತನ್ನ ಸಂಪ್ರದಾಯ ಹಾಗೂ ಪದ್ಧತಿಗಳನ್ನು ಅನುಸರಿಸಬಹುದಾದರೂ, ಅದು ಇನ್ನೊಬ್ಬರ ಪಾಲಿಗೆ ದುಃಸ್ಥಿತಿಯಾಗಬಾರದು ಎಂದೂ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

ಅಗತ್ಯ ಧಾರ್ಮಿಕ ವಿಧಿವಿಧಾನಗಳಿಂದ ಪ್ರಾಣಿಗಳ ಮೇಲಾಗುವ ಕ್ರೌರ್ಯದ ಬಗ್ಗೆ ಸಾಂವಿಧಾನಿಕ ನ್ಯಾಯಾಲಯವೊಂದು ಕಣ್ಮುಚ್ಚಿ ಕೂರಲಾಗುವುದಿಲ್ಲ ಎಂದೂ ಎಚ್ಚರಿಸಿತು. ಈ ಸಂಬಂಧ ಮಾರ್ಗಸೂಚಿಗಳನ್ನು ರಚಿಸಲು ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News