ಕೋಲ್ಕತ್ತಾ | ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯ ಸಂತ್ರಸ್ತೆ ವೈದ್ಯೆಗೆ ನ್ಯಾಯಕ್ಕಾಗಿ ಆಗ್ರಹಿಸಿ 20 ಕಿಮೀ ಮೆರವಣಿಗೆ

Update: 2024-10-19 14:11 GMT

PC : PTI 

ಕೋಲ್ಕತ್ತಾ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೊಳಗಾಗಿದ್ದ ವೈದ್ಯೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಶನಿವಾರ 20 ಕಿ.ಮೀ. ದೂರ ಮೆರವಣಿಗೆ ನಡೆಸಿದರು.

ಸಾಮಾಜಿಕ ಸಂಘಟನೆಗಳ ಸದಸ್ಯರು ಹಾಗೂ ವೈದ್ಯರು ಸೇರಿದಂತೆ ಹಲವಾರು ಪ್ರತಿಭಟನಾಕಾರರು ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಸೊದೇಪುರ್ ನಿಂದ ಮೆರವಣಿಗೆ ನಡೆಸಿದರು. ಕಳೆದ 15 ದಿನಗಳಿಂದ ಕಿರಿಯ ವೈದ್ಯರು ಆಮರಣಾಂತ ಉಪವಾಸ ನಡೆಸುತ್ತಿರುವ ಕೇಂದ್ರ ಕೋಲ್ಕತ್ತಾದ ಎಸ್ಪ್ಲನೇಡ್ ನಲ್ಲಿ ಈ ಮೆರವಣಿಗೆ ಸಮಾರೋಪಗೊಳ್ಳಲಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ಆಗಸ್ಟ್ 9ರಂದು ಅತ್ಯಾಚಾರ ಮತ್ತು ಹತ್ಯೆಗೊಳಗಾದ ವೈದ್ಯೆಗೆ ನ್ಯಾಯ ಒದಗಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.

ಕಳೆದ 15 ದಿನಗಳಿಂದ ಕೆಲವು ಕಿರಿಯ ವೈದ್ಯರು ಸಂತ್ರಸ್ತ ವೈದ್ಯೆಗೆ ನ್ಯಾಯ ಒದಗಿಸಬೇಕು ಹಾಗೂ ರಾಜ್ಯದ ಅರೋಗ್ಯ ಸೇವೆ ಮೂಲಸೌಕರ್ಯಗಳಲ್ಲಿ ವ್ಯವಸ್ಥಿತ ಬದಲಾವಣೆ ತರಬೇಕು ಎಂದು ಆಗ್ರಹಿಸಿ ಎಸ್ಪ್ಲನೇಡ್ ಪ್ರದೇಶದಲ್ಲಿ ಆಮರಣಾಂತ ಉಪವಾಸ ನಡೆಸುತ್ತಿದ್ದಾರೆ.

ಈ ನಡುವೆ, ವೈದ್ಯರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಮನವಿ ಮಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಬೇಡಿಕೆಗಳನ್ನು ಸರಕಾರ ಪರಿಶೀಲಿಸಲಿದೆ ಎಂದು ಭರವಸೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News