ಬಾಂಗ್ಲಾ ಪ್ರಜೆಗಳಿಗೆ ಚಿಕಿತ್ಸೆ ನೀಡುವುದಿಲ್ಲವೆಂದು ಘೋಷಿಸಿದ ಕೊಲ್ಕತ್ತಾ ಆಸ್ಪತ್ರೆ
ಕೊಲ್ಕತ್ತಾ: ಬಾಂಗ್ಲಾದೇಶದ ರೋಗಿಗಳಿಗೆ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದಿಲ್ಲ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದಲ್ಲಿರುವ ಜೆಎನ್ ರೇ ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.
ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜೆಎನ್ ರೇ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
"ಭಾರತವನ್ನು ಅವಮಾನಿಸಿದಕ್ಕಾಗಿ ನಾವು ಇಂದಿನಿಂದ ಅನಿರ್ದಿಷ್ಟ ಸಮಯದವರೆಗೆ ಯಾವುದೇ ಬಾಂಗ್ಲಾದೇಶದ ರೋಗಿಯನ್ನು ಚಿಕಿತ್ಸೆಗೆ ಸೇರಿಸುವುದಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸಿದ್ದೇವೆ." ಎಂದು ಆಸ್ಪತ್ರೆಯ ಅಧಿಕಾರಿ ಸುಭ್ರಾಂಶು ಭಕ್ತ್ ಹೇಳಿದ್ದಾರೆ.
"ತ್ರಿವರ್ಣ ಧ್ವಜವನ್ನು ಅವಮಾನಿಸಿರುವುದನ್ನು ನೋಡಿ, ನಾವು ಬಾಂಗ್ಲಾದೇಶಿಯರಿಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ. ಅವರ ಸ್ವಾತಂತ್ರ್ಯದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಿದೆ, ಅದಾಗ್ಯೂ, ಅವರ ಭಾರತ ವಿರೋಧಿ ಭಾವನೆಗಳನ್ನು ನಾವು ನೋಡುತ್ತಿದ್ದೇವೆ. ಇತರ ಆಸ್ಪತ್ರೆಗಳು ನಮ್ಮನ್ನು ಬೆಂಬಲಿಸುತ್ತವೆ ಮತ್ತು ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ನಾವು ಭಾವಿಸುತ್ತೇವೆ" ಎಂದು ಅವರು ಹೇಳಿದರು.