ಉದ್ಯೋಗಕ್ಕಾಗಿ ಭೂಮಿ | ಈಡಿ ಯಿಂದ ಲಾಲು, ತೇಜಸ್ವಿ ವಿರುದ್ಧ ಪೂರಕ ಆರೋಪ ಪಟ್ಟಿ ಸಲ್ಲಿಕೆ

Update: 2024-08-06 16:02 GMT

ಲಾಲು ಪ್ರಸಾದ್, ಅವರ ಪುತ್ರ ತೇಜಸ್ವಿ ಯಾದವ್ | PTI 

ಹೊಸದಿಲ್ಲಿ : ಉದ್ಯೋಗಕ್ಕೆ ಭೂಮಿ ಪ್ರಕರಣದಲ್ಲಿ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್, ಅವರ ಪುತ್ರ ತೇಜಸ್ವಿ ಯಾದವ್ ಹಾಗೂ ಇತರ 8 ಮಂದಿಯ ವಿರುದ್ಧ ಜಾರಿ ನಿರ್ದೇಶನಾಲಯ(ಈಡಿ) ಮಂಗಳವಾರ ಪೂರಕ ಆರೋಪ ಪಟ್ಟಿ ಸಲ್ಲಿಸಿದೆ.

ಜಾರಿ ನಿರ್ದೇಶನಾಲಯ(ಈಡಿ) ಆರೋಪ ಪಟ್ಟಿಯನ್ನು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರ ಮುಂದೆ ಸಲ್ಲಿಸಿದೆ. ಅವರು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿದ್ದಾರೆ.

ಜಾರಿ ನಿರ್ದೇಶನಾಲಯ(ಈಡಿ)ದ ಈ ಪ್ರಕರಣಕ್ಕೆ ಸಿಬಿಐ ದಾಖಲಿಸಿದ ಎಫ್ಐಆರ್ ಮೂಲವಾಗಿದೆ. ಈ ಪ್ರಕರಣ 2004ರಿಂದ 2009ರ ವರೆಗೆ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದಾಗ ಮಧ್ಯಪ್ರದೇಶದ ಜಬಲ್ಪುರದಲ್ಲಿ ರೈಲ್ವೆಯ ಪಶ್ಚಿಮ ಕೇಂದ್ರ ವಲಯದಲ್ಲಿ ಗ್ರೂಪ್ ಡಿ ನೇಮಕಾತಿಗೆ ಸಂಬಂಧಿಸಿದ್ದಾಗಿದೆ. ಉದ್ಯೋಗ ಪಡೆದುಕೊಂಡವರು ಉದ್ಯೋಗಕ್ಕೆ ಬದಲಾಗಿ ಭೂಮಿಯನ್ನು ಆರ್ಜೆಡಿಯ ವರಿಷ್ಠ ಲಾಲು ಪ್ರಸಾದ್ ಕುಟುಂಬ ಸದಸ್ಯರ ಅಥವಾ ಸಹವರ್ತಿಗಳ ಹೆಸರಿಗೆ ವರ್ಗಾಯಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಈಡಿ) ಆರೋಪಿಸಿದೆ.

ಈ ಹಗರಣಕ್ಕೆ ಸಂಬಂಧಿಸಿ ಲಾಲು ಪ್ರಸಾದ್, ರಾಬ್ರಿ ದೇವಿ ಮತ್ತು ಇತರರ ವಿರುದ್ಧ 2022 ಮೇ 18ರಂದು ಸಿಬಿಐ ಪ್ರಕರಣ ದಾಖಲಿಸಿತ್ತು. ಬಳಿಕ ಜಾರಿ ನಿರ್ದೇಶನಾಲಯ(ಈಡಿ) ಎಫ್ಐಆರ್ ದಾಖಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News