ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಆರ್ ಜೆಡಿಯ ಲಾಲೂ ಪ್ರಸಾದ್, ತೇಜಸ್ವಿ ಯಾದವ್ ಗೆ ದಿಲ್ಲಿ ಕೋರ್ಟ್ ಜಾಮೀನು
ಹೊಸದಿಲ್ಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ ಆರ್ ಜೆಡಿ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದಿಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದಿಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಆರೋಪಿಗಳಿಗೆ ತಲಾ 1 ಲಕ್ಷ ರೂ. ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ. ಇದರಿಂದಾಗಿ ತನಿಖೆಯ ವೇಳೆ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಮಕ್ಕಳಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ಬಂಧನದಿಂದ ಮುಕ್ತಿ ನೀಡಲಾಗಿದೆ.
ಈ ಹಿಂದೆ ಚಾರ್ಜ್ ಶೀಟ್ ಆಧರಿಸಿ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯ ನೀಡಿದ ಸಮನ್ಸ್ ನ ಅನ್ವಯ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.
2004ರಿಂದ 2009ರ ಅವಧಿಯಲ್ಲಿ ಲಾಲೂ ಪ್ರಸಾದ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದರು. ಈ ವೇಳೆ ಲಾಲು ಕುಟುಂಬಕ್ಕೆ ಜಮೀನು ರಿಯಾಯಿತಿಯಲ್ಲಿ ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಗರಣಕ್ಕೆ ಸಂಬಂಧಿಸಿ ಲಾಲೂ ಪ್ರಸಾದ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು