ಬಾಬಾ ಸಿದ್ದಿಕ್ ಹತ್ಯೆಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್
Update: 2024-10-13 07:23 GMT
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ.
ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ (66) ಅವರನ್ನು ಶನಿವಾರ ರಾತ್ರಿ ಅವರ ಪುತ್ರ ಜೀಶಾನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ಮೂರನೇ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಈ ಮಧ್ಯೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಅನುಜ್ ಥಾಪನ್ ಜೊತೆಗಿನ ಸಿದ್ದಿಕ್ ನಂಟು ಈ ಕೊಲೆಗೆ ಕಾರಣ ಎಂದು ಗ್ಯಾಂಗ್ ಸದಸ್ಯನೊಬ್ಬನ ಫೇಸ್ ಬುಕ್ ಪೋಸ್ಟ್ ಇದೀಗ ವೈರಲ್ ಆಗಿದೆ.