ಉತ್ತರಪ್ರದೇಶದಲ್ಲಿ ಸ್ಥಳೀಯ ಪತ್ರಕರ್ತನಿಗೆ ಗುಂಡೇಟು
ಶನಿವಾರ ರಾತ್ರಿ ಉತ್ತರ ಪ್ರದೇಶದ ಉನ್ನಾವೊದಲ್ಲಿ 25 ವರ್ಷದ ಸ್ಥಳೀಯ ಪತ್ರಕರ್ತನಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Update: 2023-06-25 07:33 GMT
ಉನ್ನಾವೋ: ಶನಿವಾರ ರಾತ್ರಿ ಉತ್ತರ ಪ್ರದೇಶದ ಉನ್ನಾವೊದಲ್ಲಿ 25 ವರ್ಷದ ಸ್ಥಳೀಯ ಪತ್ರಕರ್ತನಿಗೆ ಗುಂಡು ಹಾರಿಸಿ ಗಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಗಾಯಾಳು ಪತ್ರಕರ್ತ ಕಾನ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾತ್ರಿ 10.25ರ ಸುಮಾರಿಗೆ ಪಿಡಿ ನಗರದ ನಿವಾಸಿ ಮನ್ನು ಅವಸ್ತಿ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ದಾಳಿಯ ಹಿಂದಿನ ಉದ್ದೇಶ ತಕ್ಷಣವೇ ತಿಳಿದುಬಂದಿಲ್ಲ. ಸಾಧ್ಯವಿರುವ ಎಲ್ಲ ಕೋನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.